ರಾಮನಗರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಮತ್ತೊಂದು ಕಡೆ ಯತೀಂದ್ರ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಹಲವು ಸಚಿವರು ಶಾಸಕರುಗಳೇ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯ ಶಾಸಕ ಇಕ್ಬಾಲ್ ಹುಸೇನ್ ಜನವರಿ 6 ರಂದು ಡಿಕೆ ಶಿವಕುಮಾರ್ ಸಿಎಂ ಆಗೋದು ಪಕ್ಕ ಅಂತ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಸಲೀಂ ಅಹಮದ್ ಜನವರಿ 6 ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ನಮಗೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವುದು ಒಂದೇ ಗುರಿ ಜನವರಿ 6 ಅಥವಾ ಜನವರಿ 9ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಜನವರಿ 6 ರಂದು ಅಥವಾ 9 ರಂದು 99% ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಅಧಿವೇಶನ ಆದಮೇಲೆ ಸಿಎಂ ಆಗುತ್ತಾರೆ ಅದರಲ್ಲಿ ಏನು ತಪ್ಪಿದೆ? ಡಿಕೆ ಶಿವಕುಮಾರ್ ಅವರಿಗೆ ಒಂದು ಅವಕಾಶವಿದೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.








