ಕಲಬುರ್ಗಿ : ಕಳೆದ ಎರಡು ದಿನಗಳ ಹಿಂದೆ ಕಲಬುರ್ಗಿ ನಗರದ ಸರಾಫ್ ಬಜಾರ್ ನಲ್ಲಿ ಜುವೆಲ್ಲರೀ ಮಾಲೀಕನಿಗೆ ಗನ್ ತೋರಿಸಿ ಸುಮಾರು 82ಕ್ಕೂ ಅಧಿಕ ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರಿಗೆ ದರೋಡೆಕೋರರ ಸುಳಿವು ಸಿಕ್ಕಿದೆ ಎಂದು ಮಾಹಿತಿ ಲಭ್ಯವಾಗಿದೆ.
ಹೌದು ಕಲ್ಬುರ್ಗಿಯಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದರೋಡೆಕೋರರ ಬಗ್ಗೆ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದಾರೆ. ಪಶ್ಚಿಮ ಬಂಗಾಳದಿಂದ ಆಗಮಿಸಿ ಆರೋಪಿಗಳು ದರೋಡೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ದರೋಡೆಕೋರರ ಜಾಡು ಹಿಡಿದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ.
ಕಲ್ಬುರ್ಗಿಯಿಂದ ಹೈದರಾಬಾದ್ ಗೆ ತೆರಳಿ ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ಕಲ್ಬುರ್ಗಿ ಪೊಲೀಸರು ತೆರಳಿದ್ದಾರೆ. ಆರೋಪಿಗಳು ಹೈದರಾಬಾದ್ ನಿಂದ ಪಶ್ಚಿಮ ಬಂಗಾಳಕ್ಕೆ ಸೇರಿರುವ ಶಂಕೆ ವ್ಯಕ್ತವಾಗಿದೆ. ಕಲ್ಬುರ್ಗಿ ಬಸ್ ನಿಲ್ದಾಣದ ಫ್ಲ್ಯಾಟ್ ಫಾರ್ಮ್ ನಂಬರ್ 6 ರಿಂದ ಆರೋಪಿಗಳು ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ. ನಂಬರ್ 6 ರಲ್ಲಿ ಬಸ್ ಹತ್ತಿಕೊಂಡು ತೆರಳಿದ್ದಾರೆ ಎನ್ನಲಾಗಿದೆ. ಇದೀಗ ಪೊಲೀಸರು ಆರೋಪಿಗಳನ್ನು ಬೆನ್ನತ್ತಿ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ.