ಬೆಂಗಳೂರು : ಕೊಪ್ಪಳದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸತತ ಮಳೆಯಿಂದಾಗಿ ಮನೆ ಕುಸಿದು ಒಂದುವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಮನೆ ಕುಸಿದು ಒಂದುವರೆ ವರ್ಷದ ಪ್ರಶಾಂತಿ ಎನ್ನುವ ಮಗು ಸಾವನಪ್ಪಿದ್ದು, ಮನೆಯಲ್ಲಿದ್ದ ಆರು ಜನರಿಗೆ ಗಂಭೀರವಾದ ಗಾಯಗಳಾಗಿವೆ, ಗಾಯಗೊಂಡ ಹನುಮಂತಿ, ದುರ್ಗಮ್ಮ, ಭೀಮಮ್ಮ, ಹುಸೇನಪ್ಪ ಹಾಗೂ ಫಕೀರಪ್ಪ ಸೇರಿ ಆರು ಜನರಿಗೆ ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.