ಬೆಂಗಳೂರು : ರಾಜ್ಯದಲ್ಲಿ 40 ಡಿಗ್ರಿ ಸೆಲ್ಸಿಯಲ್ಸ್ ತಾಪಮಾನ ಇದೀಗ ದಾಟಿದ್ದು, ರಾಜ್ಯದ 5ಕ್ಕೂ ಹೆಚ್ಚು ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದೆ. ಗದಗ, ರೈಚೂರು, ವಿಜಯಪುರ ಬೀದರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ 40 ಡಿಗ್ರಿ ತಾಪಮಾನ ದಾಖಲಾಗಿದೆ.
ಬೆಂಗಳೂರಿನಲ್ಲಿ ಕೂಡ ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ 36 ಡಿಗ್ರಿ ಸೆಲ್ಸಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 36 ಡಿಗ್ರಿ ಸೆಲ್ಸಿಯಲ್ ತಾಪಮಾನ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ 38 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.








