ಮೈಸೂರು : ಇಂದು ಮೈಸೂರಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಹುಚ್ಚುನಾಯಿ ಕಚ್ಚಿ 20ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ಒಂದು ಘಟನೆ ನಡೆದಿದೆ.
ಗಾಯಾಳು ಮಕ್ಕಳಿಗೆ ತಕ್ಷಣ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಇಲ್ಲದೆ ಪೋಷಕರು ಪರದಾಟ ನಡೆಸುತ್ತಿದ್ದಾರೆ.ವೈದ್ಯರ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸೂಕ್ತ ಚಿಕಿತ್ಸೆ ಸಿಗದೇ ಪೋಷಕರು ಖಾಸಗಿ ಆಸ್ಪತ್ರೆಗಳ ಮೊರೆ ಹೋಗಿದ್ದಾರೆ. ಗ್ರಾಮದಲ್ಲಿ ಒಂದು ಹುಚ್ಚು ನಾಯಿಯನ್ನು ಜನರು ಹೊಡೆದು ಕೊಂದಿದ್ದಾರೆ.