ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊರೊನ ಕೇಸ್ ಪತ್ತೆಯಾಗಿವೆ. ಅಲ್ಲದೇ ಸೋಂಕಿತರಾದಂತ 18 ಜನರು ಗುಣಮುಖರಾಗಿದ್ದಾರೆ ಹಿಂದೂರಾಜ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಈ ಕುರಿತು ಮಾಹಿತಿ ನೀಡಿದೆ.
ಇನ್ನು ರಾಜ್ಯದಲ್ಲಿ ಕೊರೊನ ಸೋಂಕಿ ತರ ಸಂಖ್ಯೆ 1,705 ಕ್ಕೆ ಏರಿಕೆಯಾಗಿದ್ದು ಪ್ರಸ್ತುತ ರಾಜ್ಯದಲ್ಲಿ ಕೋರೋನ ಆಕ್ಟಿವ್ ಪ್ರಕರಣಗಳ ಸಂಖ್ಯೆ 527 ಇದೆ. ಕಳೆದ 24 ಗಂಟೆಯಲ್ಲಿ 496 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಇಂದು 150 ಮಂದಿಗೆ ಕೊರೋನಾ ಸೋಂಕು ಪತ್ತೆಯಾದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 527ಕ್ಕೆ ಏರಿಕೆಯಾಗಿದೆ. ಇವರಲ್ಲಿ 520 ಮಂದಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 7 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದೆ.