ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಈಗಾಗಲೇ ಸೆಪ್ಟೆಂಬರ್ 22 ರಿಂದ ಆರಂಭವಾಗಿದ್ದು, ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆ ಶಿಕ್ಷಕರ ಅವಧಿಯನ್ನು ಸಮೀಕ್ಷೆ ಕಾರ್ಯಕ್ಕೆ ವಿಸ್ತರಿಸಿದೆ. ಅಲ್ಲದೆ ಶಾಲಾ ಅವಧಿ ಕೂಡ ಪರಿಷ್ಕರಣೆ ಮಾಡಲಾಗಿದೆ.
ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ರವರೆಗೆ ಶಾಲೆಯಲ್ಲಿ ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕು. ಬಳಿಕ ಮಧ್ಯಾಹ್ನ 1 ಗಂಟೆಯಿಂದ ಸಮೀಕ್ಷಾ ಕಾರ್ಯದಲ್ಲಿ ಅವರು ಭಾಗಿಯಾಗಬೇಕು. ಅಕ್ಟೊಬರ್ 12 ರವರೆಗೆ ಸಮೀಕ್ಷೆಯಲ್ಲಿ ಭಾಗಿಯಾಗಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 24ರ ವರೆಗೆ ಸರ್ವೆ ಮಾಡಲು ಆದೇಶ ನೀಡಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅಕ್ಟೋಬರ್ 12 ರವರೆಗೆ ಸಮೀಕ್ಷೆ ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.