ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಟೆಕ್ನಿಕಲ್ ಕಮಿಟಿ ವರದಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹಾಗಾಗಿ ಇಂದು ಮದ್ಯಾಹ್ನ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಹೃದಯಾಘಾತ ತಡೆಗೆ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಇದೀಗ ಮುಂದಾಗಿದೆ.ಇಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ. ಧೂಮಪಾನ, ಮಧ್ಯಪಾನ ಹಾಗೂ ಅತಿಯಾದ ಮೊಬೈಲ್ ಬಳಕೆ ಅನೇಕ ವಿಚಾರಗಳ ಬಗ್ಗೆ ನಿಯಮ ಜಾರಿಗೆ ತರುವ ಕುರಿತು ಚಿಂತನೆ ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
15 ವರ್ಷದೊಳಗಿನ ಶಾಲಾ ಮಕ್ಕಳಿಗೆ ಸ್ಕ್ರೀನಿಂಗ್ ಕಡಿಮೆ ಮಾಡುವುದು, ಎಲ್ಲಾ ಶಾಲಾ ಮಕ್ಕಳ ಹೃದಯ ತಪಾಸಣೆ ಮಾಡುವುದು, ಪಠ್ಯಕ್ರಮದಲ್ಲಿ ಹೃದಯ ಆರೋಗ್ಯ ಕುರಿತು ಬೋಧನೆ ಮಾಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಬ್ಯಾನ್ ಮಾಡುವ ಬಗ್ಗೆ ಗಮನಹರಿಸಲಾಗುತ್ತದೆ. 18 ವರ್ಷದೊಳಗಿನ ಮಕ್ಕಳಿಗೆ ಧೂಮಪಾನ ಮತ್ತು ಮಧ್ಯಪಾನ ಮಾರಾಟಕ್ಕೆ ಕಡಿವಾಣ ಹಾಕುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.