Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 4 ಬಲಿ : ಕಳೆದ 40 ದಿನಗಳಲ್ಲಿ 22 ಜನರು ಸಾವು!
KARNATAKA

BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 4 ಬಲಿ : ಕಳೆದ 40 ದಿನಗಳಲ್ಲಿ 22 ಜನರು ಸಾವು!

By ಸುರೇಶ್‌

ಹಾಸನ : ಇತ್ತೀಚಿಗೆ ಹೃದಯಘಾತ ಪ್ರಕರಣಗಳು ಸಾಮಾನ್ಯವಾಗಿ ಬಿಟ್ಟಿವೆ. ಆದರೆ ಹಾಸನದಲ್ಲಿ ಮಾತ್ರ ಈ ಒಂದು ಹೃದಯಾಘಾತದಿಂದ ಸಾವನಪುತ್ತಿರುವವರ ಪ್ರಕರಣಗಳು ಜನರಲ್ಲಿ ಆತಂಕ ಹೆಚ್ಚಿಸಿದೆ. ಏಕೆಂದರೆ ಕಳೆದ 40 ದಿನಗಳಲ್ಲಿ ಇಂದಿನವರೆಗೆ ಒಟ್ಟು 22 ಜನರು ಈ ಒಂದು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಅಲ್ಲದೆ ಇಂದು ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಒಟ್ಟು ನಾಲ್ವರು ಹೃದಯಾಘಾತದಿಂದ ಸಾವನಪ್ಪಿದ್ದಾರೆ.

ಮನೆಯಲ್ಲೇ ಕುಸಿದು ಬಿದ್ದು ಮಹಿಳೆ ಸಾವು!

ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 21 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ (50) ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಇದುವರೆಗು 21ಜನ ಬಲಿಯಾಗಿದ್ದಾರೆ.

ಟೀ ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!

ಅಲ್ಲದೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿರುವಾಗಲೇ ಪ್ರಾಧ್ಯಾಪಕ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಮುತ್ತಯ್ಯ (58) ಸಾವನಪ್ಪಿದ್ದಾರೆ. ಇಂದು ಬೆಳಿಗ್ಗೆ ಕಾಲೇಜಿನ ಎದುರುಗಡೆ ಇರುವ ಕ್ಯಾಂಟೀನ್ ನಲ್ಲಿ ಟೀ ಕುಡಿಯುತ್ತಿರುವಾಗ ಏಕಾಎಕಿ ಹೃದಯಘಾತದಿಂದ ಮುತ್ತಯ್ಯ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಜಮೀನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವು!

ಇನ್ನು ಹಾಸನ ಜಿಲ್ಲೆಯ ಜನರಾಯಪಟ್ಟಣದಲ್ಲಿ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವನ್ನಪ್ಪಿದ್ದಾನೇ. ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ. 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.

ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಹಿನ್ನೆಲೆ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು. ತಕ್ಷಣ ಸ್ಥಳೀಯರು ಲೋಹಿತ್​ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್ ಸಾವನ್ನಪ್ಪಿದ್ದಾರೆ.

ಡಿ ಗ್ರೂಪ್ ನೌಕರ ಸಾವು!

ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ ಮುಂದುವರೆದಿದ್ದು ಇಂದು ಬೆಳಿಗ್ಗೆ ಅಷ್ಟೇ ಹೃದಯಘಾತಕ್ಕೆ ಹಾಸನ ಜಿಲ್ಲೆಯ ಪ್ರತ್ಯೇಕ ತಾಲೂಕುಗಳಲ್ಲಿನ ಒಟ್ಟು ಮೂರು ಜನರು ಬಲಿಯಾಗಿದ್ದರು. ಇದೀಗ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಡಿ ಗ್ರೂಪ್ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹೌದು ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53) ಎನ್ನುವವರು ಸಾವನಪ್ಪಿದ್ದಾರೆ. ಚೆನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿರುವ ಅವರು ರಾತ್ರಿ ಮನೆಯಲ್ಲಿ ಮಲಗಿದ್ದಾಗ ಕುಮಾರ್ ಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಆಗಲಿ ಅವರು ಸಾವನ್ನಪ್ಪಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.