ಬೆಂಗಳೂರು : ರಾಜ್ಯದಲ್ಲಿ ಕೋರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಪ್ರಕಟಿಸಿದೆ.
ಹೌದು ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಕೋವಿಡ್ ಗೈಡ್ಲೈನ್ಸ್ ಪ್ರಕಟಿಸಲಾಗಿದ್ದು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಇದೀಗ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ರೋಗ ಲಕ್ಷಣಗಳಿದ್ದರೆ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡಬೇಕು.
ಸಂಪೂರ್ಣ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಗುಣಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ವಾಪಸ್ ಕಳುಹಿಸಬೇಕು ಹಾಗು ಪೋಷಕರಿಗೆ ತಿಳಿಸಿ ಅಂತಹ ಮಕ್ಕಳನ್ನು ಮನೆಗೆ ಕಳುಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.