ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ರಸ್ತೆಯಲ್ಲಿ ಮಲಗಿದ್ದಂತಹ ಮೂರು ಹಸುಗಳ ಕೆಚ್ಚಲುಗಳನ್ನು ಕಿಡಿಗೇಡಿಗಳು ಕೊಯ್ದಿರುವ ಹೀನ ಕೃತ್ಯ ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ನಡೆದಿದೆ.
ಹೌದು ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಒಂದು ಘಟನೆ ನಡೆದಿದೆ. ರಸ್ತೆಯಲ್ಲಿ ಮಲಗಿದ್ದಂತಹ ಮೂರು ಹಸುಗಳನ್ನು ಕೆಚ್ಚಲನ್ನು ಕಿಡಿಗೇಡಿಗಳು ಕೊಯ್ದಿದ್ದಾರೆ. ಸದ್ಯಕ್ಕೆ ಚಾಮರಾಜಪೇಟೆಯ ಬಸವ ಆಸ್ಪತ್ರೆಯಲ್ಲಿ ಮೂರು ಹಸುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ರಾತ್ರಿ ಮೂರು ಹಸುಗಳ ಕೆಚ್ಚಲನ್ನು ಕಿಡಿಗೇಡಿಗಳು ಕೊಯ್ದಿದ್ದಾರೆ. ಮನುಷ್ಯರಿಗೆ ಒಂದು ಸಾರಿ ಸೂಜಿ ಚುಚ್ಚಿದರು ಸಾಕು ನೋವು ಎಂದು ಕಿರುಚಿ ಹೇಳುತ್ತೇವೆ. ಆದರೆ ಪಾಪ ಮಾತು ಬರದೇ ಇರುವಂತಹ ಮೂಕಪ್ರಾಣಿಗಳ ಕೆಚ್ಚಲು ಕೊಯ್ಯುವಾಗ ಎಷ್ಟು ವೇದನೆ ಅನುಭವಿಸಲಿಲ್ಲ? ಸದ್ಯ ಹಸುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂಥ ವಿಕೃತಿ ಮೆರೆದ ಪಾಪಿಗಳನ್ನು ಒದ್ದು ಒಳಗೆ ಹಾಕಿ ಎಂದು ಸ್ಥಳೀಯ ನಿವಾಸಿಗಳು ಕಿಡಿ ಕಾರಿದ್ದಾರೆ.