ಗದಗ : ಇತ್ತೀಚಿಗೆ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಗದಗದಲ್ಲಿ ಕಾಮುಕ ತಂದೆ ಒಬ್ಬ ಮಗಳ ಮೇಲೆ ಕಳೆದು ಒಂದು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.
ಹೌದು ಗದಗ ಜಿಲ್ಲೆಯ ಮುಳಗುಂದದಲ್ಲಿ ಈ ಒಂದು ಘಟನೆ ನಡೆದಿದ್ದು, ನನ್ನ ಅತಿ ಕಳೆದ ಒಂದು ವರ್ಷಗಳಿಂದ ತನ್ನ 16 ವರ್ಷದ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಈ ಹಿನ್ನೆಲೆ ಈಗ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ತಾಯಿ ದೂರು ನೀಡಿದ ನಂತರ ಇದೀಗ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಬಾಲಕಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲೆ ಚಿಕಿತ್ಸೆ ನೀಡಲಾಗುತ್ತಿದ್ದು, ಮೆಡಿಕಲ್ ಟೆಸ್ಟ್ ಬಳಿಕ ಬಾಲಕಿ ಗರ್ಭಿಣಿ ಆಗಿರುವುದು ತಿಳಿದುಬಂದಿದೆ. ಇದ್ದ ಆರೋಪಿ ತಂದೆಯನ್ನು ಅರೆಸ್ಟ್ ಮಾಡಿರುವ ಮುಳುಗುಂದ ಠಾಣೆ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.