ಮೈಸೂರು : ಮೈಸೂರಿನಲ್ಲಿ ಮತ್ತೊಂದು ಪೈಶಾಚಿಕ ಘಟನೆ ನಡೆದಿದ್ದು, ಹರಕೆಗೆ ಬಿಟ್ಟ ಕರುವಿನ ಬಾಲವನ್ನು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಹರಕೆಗೆ ಬಿಟ್ಟ ಕರುವಿನ ಬಾಲದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಕೊಯ್ದು ಬಾಲವನ್ನೇ ಕಟ್ ಮಾಡಿದ್ದಾರೆ. ಗಾಯಗೊಂಡಿರುವ ಕರುವಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಘಟನೆ ಸಂಬಂಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.