ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಮೇಲೆ ಬೈಕ್ ಸವಾರ ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.