ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್-ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬನ್ನಿಹಾಳ ಗ್ರಾಮದಲ್ಲಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಟ್ರ್ಯಾಕ್ಟರ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.