ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಚಲಿಸುತ್ತಿದ್ದ ಕಾರು ಒಂದು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದು, 6 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತರನ್ನು ಅರ್ಜುನ, ಶ್ರೀಧರ್ ಮತ್ತು ಶರವಣ ಎಂದು ಗುರುತಿಸಿದೆ.
ಚಿತ್ರದುರ್ಗ ಜಿಲ್ಲೆಯ ಸೀಬಾರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದ್ದು, ಮೂವರು ಸಾವನಪ್ಪಿದ್ದಾರೆ. ಇನ್ನು ಅಪಘಾತದಲ್ಲಿ 6 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಳಿಸಿದ್ದಾಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಮೂವರು ತಮಿಳುನಾಡು ಮೂಲದವರು ಎಂದು ಹೇಳಲಾಗುತ್ತಿದ್ದು, ಮೃತ ಅರ್ಜುನ್ ತಮಿಳುನಾಡು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ.