ವಿಜಯಪುರ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಸ್ವಿಫ್ಟ್ ಡಿಸೈರ್ ಕಾರು KA 28 Z 0379 ನಂಬರ್ ಕಾರು ಅಪಘಾತ ಆಗಿದೆ. ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ತೆರಳುತ್ತಿದ್ದಾಗ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ವಿಜಯಪುರ ತಾಲೂಕಿನ ಉತ್ನಾಳ ಗ್ರಾಮದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲೆಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ವಿಜಯಪುರ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.