ಹಾಸನ : ರಸ್ತೆ ಬದಿಯ ಕ್ಯಾಂಟೀನ್ ಗೆ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದು ಉಳಿದ ಮೂವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಳಗಳಲೇ ಎಂಬಲ್ಲಿ ನಡೆದಿದೆ.
ಹೌದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಳಗಳಲೆ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಳಗಳಲೇ ಗ್ರಾಮದಲ್ಲಿ ರಸ್ತೆ ಬರಿಯ ಕ್ಯಾಂಟೀನ್ ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಮೂಲದ ವೀರೇಶ್ ಹಾಗೂ ಲಾರಿಯಲ್ಲಿದ್ದ ವ್ಯಕ್ತಿ ಸಾವನಪ್ಪಿದ್ದಾನೆ.
ಘಟನೆಯಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು ಕೂಡಲೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಹೆಚ್ಚಿನ ಚಿಕಿತ್ಸೆಗಾಗಿ ಗಾಯಗೊಂಡ ಮೂವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕುರಿತು ಸಕಲೇಶಪುರ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.