ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕುರಿ ಮೇಕೆ ತುಂಬಿದ ಲಾರಿಗೆ KSRTC ಬಸ್ ಡಿಕ್ಕಿಯಾಗಿ ಲಾರಿಯಲ್ಲಿದ್ದ ಸೀನಪ್ಪ (50) ಮತ್ತು ನಜೀರ್ ಅಹಮದ್ (36) ಸಾವನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಗೊಂಡೆನಹಳ್ಳಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡನಹಳ್ಳಿಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ತ್ತಾನೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾಪುರ ತಾಲೂಕಿನಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕೆ ಹೊಡೆದ ಪರಿಣಾಮ ಸ್ಥಳದಲ್ಲಿ ಮೂವರು ಸಾವನಪ್ಪಿದ್ದು 7 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿತ್ತು.