ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಮಲಾಪುರ ಬಳಿ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಬೆಂಗಳೂರು ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರ. ಕಿಣ್ಣಿ ಸಡಕ್ ಗ್ರಾಮದ ಮೂವರು ಬೈಕ್ ಸವಾರರು ಗ್ರಾಮದಿಂದ ಕಲಬುರಗಿಗೆ ಹೋಗುತ್ತಿದ್ದರು. ಕಲಬುರಗಿಯಿಂದ ಹುಮನಾಬಾದ್ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕಮಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.