ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಟ್ರೇಲರ್ ಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರೇಲರ್ ಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಮಹಮ್ಮದ್ ಆಸೀಫ್ (12) ಮುಮ್ತಾಜ್ (38) ಹಾಗೂ ಶೇಖ್ ಹುಸೇನ್ (45) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.