ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಬಳಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಮೃತರನ್ನು ಸಾಗರ್ ಬೈಚದಾಳ್ (21) ಹಾಗೂ ಸುದೀಪ ಗುದ್ದಿ (20) ಎಂದು ಗುರುತಿಸಲಾಗಿದೆ.
ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.