ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಚಿಂದಿ ಆಯುತ್ತಿದ್ದ ಯುವತಿ ಹಾಗೂ ಬಾಲಕಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಇಬ್ಬರ ಮೇಲೆ ಅತ್ಯಾಚಾರ ಆಗಿ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ.
ಹೌದು ಚಿಂದಿ ಆಯುತಿದ್ದ ಯುವತಿ ಹಾಗೂ ಅಪ್ರಾಪ್ತ ಬಾಲಕಿ ಸಂಶಯಾಸ್ಪದವಾಗಿ ಸಾವನಪ್ಪಿದ್ದಾರೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ.ಯುವತಿ ಹಾಗೂ ಅಪ್ರಾಪ್ತ ಬಾಲಕಿಯ ಮೇಲೆ ರೇಪ್ ಮಾಡಿ ಕೊಲೆ ಗೈದಿರುವ ಶಂಕೆ ವ್ಯಕ್ತವಾಗಿದೆ. ಫೆಬ್ರವರಿ 12ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.