ಬೆಳಗಾವಿ : ಇತ್ತೀಚಿಗೆ ದೇಶದಲ್ಲಿ ಕಾಮುಕರ ಅಟ್ಟಹಾಸ ಮೀರುತ್ತಿದ್ದು, ಇದೀಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಅಂಗನವಾಡಿಗೆ ನುಗ್ಗಿ ಶಿಕ್ಷಕೀಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿಯಲ್ಲಿ ಅಡುಗೆ ಮಾಡುವ ಮಹಿಳಾ ಸಹಾಯಕಿಯ ಗಂಡನೊಬ್ಬ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿರುವ ಅಡುಗೆ ಸಿಬ್ಬಂದಿಗೆ ಶೌಚಾಲಯ ಸ್ವಚ್ಛ ಮಾಡುವಂತೆ ಅಡುಗೆ ಮಾಡುವ ಮಹಿಳೆಗೆ ಶಿಕ್ಷಕಿ ಹೇಳಿದ್ದಾರೆ. ಈ ವಿಚಾರವನ್ನ ತನ್ನ ಗಂಡನಿಗೆ ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ಹೋಗಿ ಹೇಳಿದ್ದಾರೆ.
ಇದರಿಂದ ಕೋಪಗೊಂಡು ಅಂಗನವಾಡಿಗೆ ಆಗಮಿಸಿದ್ದ ಆರೋಪಿ ಸಿದ್ರಾಯಿ ಕರ್ಲಟ್ಟಿ, ತನ್ನ ಹೆಂಡತಿಗೆ ಶೌಚಾಲಯ ಕ್ಲಿನ್ ಮಾಡಲು ಹಚ್ಚುತ್ತಿಯಾ ಅಂತಾ ಅವಾಚ್ಯವಾಗಿ ನಿಂದಿಸಿದ್ದಾರೆ.ಇದೇ ವೇಳೆ ಶಿಕ್ಷಕಿ ಸೀರೆ ಎಳೆದು ಮಾನಭಂಗ ಪಡಿಸಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಇನ್ನು ಶಿಕ್ಷಕಿ ಬ್ರೈನ್ ಟ್ಯೂಮರ್ದಿಂದ ಬಳಲುತ್ತಿದ್ದು, ಮಾನಸಿಕ ಕಿರುಕುಳ ತಾಳಲಾರದೇ ಆತ್ಮಹತ್ಯೆಗೂ ಯತ್ನಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.