ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 16 ವರ್ಷದ ಇಬ್ಬರು ಹಾಗೂ 15 ವರ್ಷದ ಒಬ್ಬ ಬಾಲಕಿ ಸೇರಿದಂತೆ ಒಟ್ಟು ಮೂರು ಜನ ಅಪ್ರಾಪ್ತೇಯರ ಮೇಲೆ ಮೂವರು ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನಲ್ಲಿ ನಡೆದಿದೆ.
ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ : ನಾಳೆಯಿಂದ ‘ರಾಗಿ ಮಾಲ್ಟ್’ ಮಿಶ್ರಿತ ಹಾಲು ವಿತರಣೆ
ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯ ಅದ್ಧೂರಿ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ್, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಬಂಧಿತ ಆರೋಪಿಗಳು ಎಂದು ಹೇಳಲಾಗುತ್ತಿದೆ.
ಇಬ್ಬರು 16 ವರ್ಷದ ಬಾಲಕಿಯರು ಮತ್ತು 15 ವರ್ಷದ ಒಬ್ಬ ಬಾಲಕಿಯನ್ನು ದೇವಸ್ಥಾನದ ಬಳಿ ಹೋಗುತ್ತಿದ್ದಾಗ ಬಲವಂತವಾಗಿ ತಮ್ಮ ಕಾರಿನಲ್ಲಿ ಕೂಡ್ರಿಸಿಕೊಂಡು, ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ ಎಂದೂ ದೂರಿನಲ್ಲಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ರಾಯಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
12 ರಾಜ್ಯಗಳಿಂದ ‘ರಾಜ್ಯಸಭೆಗೆ’ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ | ಸಂಪೂರ್ಣ ಪಟ್ಟಿ ಇಲ್ಲಿದೆ