ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಹಾಡಹಾಗಲೇ ಯುವಕನ ಮೇಲೆ ಆಸಿಡ್ ದಾಳಿ ನಡೆದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಸಿಡ್ ದಾಳಿಯಿಂದ ಗಾಯಗೊಂಡ ನಾಗೇಶ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.