ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಪತ್ನಿಯನ್ನು ಗುಂಡಿಕ್ಕಿ ಕೊಂದು ವಿಷ ಸೇವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಈ ಘಟನೆ ನಡೆದಿದ್ದು, ರಾಮಚಂದ್ರಪ್ಪ (52) ಎಂಬಾತ ತನ್ನ ಪತ್ನಿ ವಿನೂತಾ (48)ಎಂಬುವರನ್ನು ಗುಂಡಿಕ್ಕಿ ಕೊಂದು ನಂತರ ಭಯಕ್ಕೆ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕುಡಿದ ಮತ್ತಿನಲ್ಲಿ ರಾಮಚಂದ್ರ ಪತ್ನಿ ಜೊತೆ ಗಲಾಟೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿದ್ದು. ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.