ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸೆಕ್ಯೂರಿಟಿ ಗಾರ್ಡ್ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿದೆ.
ಚಾಕುವಿನಿಂದ ಇರಿದು ನೇಪಾಳ ಮೂಲದ ಗಣೇಶ್ (32) ಎನ್ನುವ ಸೆಕ್ಯೂರಿಟಿ ಗಾರ್ಡನ್ನು ಕೊಲೆ ಮಾಡಲಾಗಿದೆ. ಬ್ಯಾಟರಾಯನಪುರದ ಟಿಂಬರ್ ಗಾರ್ಡನ್ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ. ಬ್ಯಾಟರಾಯನಪುರದ ಗಾರ್ಮೆಂಟ್ ನಲ್ಲಿ ಗಣೇಶ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ.
ಸದ್ಯ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಕೊಲೆ ಆರೋಪಿಗಳಿಗಾಗಿ ಸದ್ಯ ಪೋಲಿಸಲು ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.