ಮೈಸೂರು : ರಾಜ್ಯದಲ್ಲಿ ಗೋವಿನ ಮೇಲಿನ ಹಲ್ಲೆ ಮುಂದುವರೆದಿದ್ದು, ಇದೀಗ ದೇವರಿಗೆ ಹರಕೆ ಬಿಟ್ಟಿದ್ದ ಗೂಳಿಗೆ ಕಿಡಿಗೇಡಿಗಳು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಹನಗಳ್ಳಿ ಗ್ರಾಮದಲ್ಲಿ ನಿನ್ನೆ ಸಂಜೆ ಹೊಲದಲ್ಲಿ ಮೇಯಲು ಹೋಗಿದ್ದ ವೇಳೆ ದುಷ್ಕರ್ಮಿಗಳು ಗೂಳಿಯ ಹಿಂಬಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.