ಮಂಡ್ಯ : ರಾಜ್ಯದಲ್ಲಿ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪಂಡಿತಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಅಪಘಾತ ಸಂಭವಿಸಿದ್ದು, ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಂಜನಹಳ್ಳಿ ನಾಗಸ್ವಾಮಿ ಹಾಗೂ ದೊಡ್ಡಮಾದಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ಕೆಎಸ್ ಆರ್ ಟಿಸಿ ಬಸ್ ತೆರಳುತ್ತಿತ್ತು. ಈ ವೇಳೆ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.