ಬೆಂಗಳೂರು : ಈಗಾಗಲೇ ಹಲವು ವಿಧೇಯಕಗಳನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು ಇದೀಗ ಮತ್ತೊಂದು ವಿಧೇಯಕವನ್ನು ವಾಪಾಸ್ ಕಳುಹಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನೆಡೆಯಾಗಿದ್ದು, ಕೆಪಿಎಸ್ಸಿಯಲ್ಲಿ ಬದಲಾವಣೆ ತರುವ ಉದ್ದೇಶದೊಂದಿಗೆ ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ಲೋಕ ಸೇವಾ ಆಯೋಗ ತಿದ್ದುಪಡಿ -2025ನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಈ ಹಿಂದೆ ಕೆಪಿಎಸ್ಸಿಯಲ್ಲಿ ಬದಲಾವಣೆ ತರಬೇಕಾದರೂ ರಾಜ್ಯ ಸರ್ಕಾರ ಮೊದಲು ಕೆಪಿಎಸ್ಸಿಯೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಬೇಕಿತ್ತು. ಕೆಪಿಎಸ್ಸಿಯನ್ನು ಸಂಪರ್ಕಿಸುವ ಅಗತ್ಯವಿಲ್ಲ ಎಂಬ ಅಂಶ ಸೇರಿಸಿತಿದ್ದು ಪಡಿ ತರಲಾಗಿತ್ತು. ಕಾನೂನು ಸಲಹೆ ಪಡೆದು ಮರುಸಲ್ಲಿಕೆ ಮಾಡುವಂತೆ ರಾಜ್ಯಪಾಲರು ಹಿಂದಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
3 ವಿಧೇಯಕಕ್ಕೆ ಅಂಕಿತ
ಇನ್ನು 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಬೆಂಗಳೂರು ಅರಮನೆ ಮೈದಾನದ ಭೂಮಿ ಬಳಕೆ ಮತ್ತು ಪರಿಹಾರ ನೀಡುವುದಕ್ಕೆ ಸಂಬಂಧಿಸಿದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ತಿದ್ದುಪಡಿ ವಿಧೇಯಕ ಸೇರಿ ಮೂರು ವಿಧೇಯಕ ಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಅದರೊಂದಿಗೆ ಆದಾಯ ತೆರಿಗೆ ವಾರ್ಷಿಕ 2,400 2.2 2,500 2. ಸಂಗ್ರಹಿಸುವ(ತಿದ್ದುಪಡಿ) ವಿಧೇಯಕ ಹಾಗೂ ಬಿಬಿಎಂಪಿ ವ್ಯಾಪ್ತಿ ಯ ಬೀದಿಸಾರ್ವಜನಿಕ ಬೀದಿ ಗಳೆಂದು ಘೋಷಿಸುವ ಬಿಬಿಎಂಪಿ (ತಿದ್ದುಪಡಿ) ವಿಧೇಯಕಕ್ಕೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ತಿಳಿದುಬಂದಿದೆ.