ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಕ್ಯಾಬ್ ಬುಕ್ ಮಾಡಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿರುವ ಘಟನೆ ನಡೆದಿದೆ.
ಹೌದು, ಜ.27 ರಂದು ಮಧ್ಯರಾತ್ರಿ 2 ಗಂಟೆಗೆ ಯುವತಿಯೋರ್ವಳು ಕಮ್ಮನಹಳ್ಳಿಯಿಂದ ವೈಟ್ ಫೀಲ್ಡ್ ಗೆ ಊಬರ್ ಕ್ಯಾಬ್ ಬುಕ್ ಮಾಡಿದ್ದಳು. ಕ್ಯಾಬ್ ಬಂದ ಕೂಡಲೇ ಹತ್ತಿ ಕುಳಿತಿದ್ದಾಳೆ. ಆಗ ಅಲ್ಲಿಗೆ ಬಂದ ಇಬ್ಬರು ಕಾಮುಕರು ಯುವತಿಯಿದ್ದ ಕಾರಿನೊಳಗೆ ನುಗ್ಗಿದ್ದಾರೆ ಭಯಗೊಂಡ ಯುವತಿ ಕಾರಿನಿಂದ ಇಳಿದು ಓಡಿದ್ದಾಳೆ. ಯುವತಿಯನ್ನು ಬಿಡದೇ ಬೆನ್ನಟ್ಟಿದ ಕಾಮುಕರು ಆಕೆಯನ್ನು ನೆಲಕ್ಕೆ ಬೀಳಿಸಿ ಯವತಿಯ ಎದೆಭಾಗ ಸ್ಪರ್ಶಿಸಿದ್ದಾರೆ, ಅಲ್ಲದೇ ಬಟ್ಟೆ ಬಿಚ್ಚಲು ಕೂಡ ಯತ್ನಿಸಿದ್ದಾರೆ. ಕೂಡಲೇ ಯುವತಿ ಜೋರಾಗಿ ಕಿರುಚಿಕೊಂಡಿದ್ದು , ಸಾರ್ವಜನಿಕರು ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲೇ ಕಾಮುಕರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.