ಕೊಲ್ಕತ್ತ : ಕೊಲ್ಕತ್ತಾದಲ್ಲಿ ಇತ್ತೀಚೆಗೆ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ನಂತರ ರಾಷ್ಟ್ರವ್ಯಾಪಿ ಆಕ್ರೋಶದ ನಡುವೆಯೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಪೊದೆಯೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.
ಹೌದು ಕೋಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಆನಂದಪುರ ಗ್ರಾಮದ ರಸ್ತೆ ಬದಿಯ ಪೊದೆಯಲ್ಲಿ ಇಂದು ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಆ ಶವದ ಮೇಲೆ ಹಲವಾರು ಗಾಯಗಳಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳೀಯರು ಮೊದಲು ಶವವನ್ನು ಕಂಡು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆನಂದಪುರದ ಪೊದೆಗಳ ಹಿಂದೆ ಅಪರಿಚಿತ ಮಹಿಳೆಯ ಶವವನ್ನು ಪತ್ತೆ ಮಾಡಿದ ಸ್ಥಳೀಯ ನಿವಾಸಿಗಳು ಆಕೆಯನ್ನು ಗುರುತಿಸಲು ಸಾಧ್ಯವಾಗದ ಕಾರಣ ಅವರು ಆ ಪ್ರದೇಶದವರಂತೆ ತೋರುತ್ತಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಪ್ರಕರಣದ ತನಿಖೆಯನ್ನು ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳಿಗಾಗಿ ಕಾಯುತ್ತಿದ್ದಾರೆ.ಈ ಬಗ್ಗೆ ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.