ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕಟ್ಟಡದ ಮೇಲಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಧನ್ವಂತರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಮೃತಪಟ್ಟಿದ್ದು, ಮೃತ ವಿದ್ಯಾರ್ಥಿ ಕೇರಳ ಮೂಲದವರು ಎಂದು ಗುರುತಿಸಲಾಗಿದೆ. ಮೊಬೈಲ್ ನಲ್ಲಿ ಮಾತನಾಡುತ್ತಾ ಕಟ್ಟಡದಿಂದ ಕೆಳಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.