ಹಾಸನ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆರೆಬೀದಿಯ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಶ್ರೀನಿವಾಸ್ (43), ಶ್ವೇತಾ (36) ಹಾಗೂ ಮಗಳು ನಾಗಶ್ರೀ (13) ಎಂದು ಗುರುತಿಸಲಾಗಿದೆ.
ಕಾರು ಚಾಲಕನಾಗಿದ್ದ ಶ್ರೀನಿವಾಸ್, ಖಾಸಗಿ ಶಾಲೆಯಲ್ಲಿ ಪತ್ನಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತಿಚೆಗೆ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಕಳೆದ ಮಂಗಳವಾರ ಮೂವರು ನಾಪತ್ತೆಯಾಗಿದ್ದರು. ಕುಟುಂಬದವರು ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ನಿನ್ನೆ ಸಂಜೆಗೆ ಬಾಗೂರು ಹೋಬಳಿ ಮುದ್ದಾಪುರ ಬಳಿ ಶ್ರೀನಿವಾಸ್ ಶವ ಪತ್ತೆಯಾಗಿದ್ದು, ಶ್ವೇತಾ ಹಾಗೂ ನಾಗಶ್ರೀ ಶವಕ್ಕಾಗಿ ಹುಡುಕಾಟ ನಡೆಸಲಾಗಿದೆ. ಸ್ಥಳಕ್ಕೆ ಎಸ್ ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಲ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.