ಬೆಂಗಳೂರು : ಮಾಜಿ ಸಚಿವ ಬಿ. ನಾಗೇಂದ್ರಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯಪಾಲ ಥಾವರ್ ಚೆಂದ ಗೆಹ್ಲೊಟ್ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ.
ಹೌದು ಬಿ.ನಾಗೇಂದ್ರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ED ಅಧಿಕಾರಿಗಳು ಪ್ರಸಿಕ್ಯೂಶನ್ ಗೆ ಅನುಮತಿ ಕೋರಿದ್ದರು. ಹೀಗಾಗಿ ಶನಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಾಸಿಕ್ಯೂಶನ್ ಗೆ ಕಳೆದ ಒಂದು ತಿಂಗಳ ಹಿಂದೆನೇ ಜಾರಿ ನಿರ್ದೇಶನಲಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಶನಿವಾರ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.