ಮೈಸೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಜನದಟ್ಟಣೆ ಪ್ರದೇಶಗಳಲ್ಲಿ ಸಾರ್ವಜನಿಕರು ಓಡಾಡುವಾಗ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದೆ.
ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮುಂಜಾಗೃತಾ ಕ್ರಮಗಳನ್ನು ಅನುಸರಿಸಿಸುತ್ತಿದ್ದು, ಮೈಸೂರಿನ ತಮ್ಮ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಮಾಸ್ಕ್ ಧರಿಸಿ ಜನತಾ ದರ್ಶನ ಮಾಡಿದ್ದಾರೆ.
ಇನ್ನು ರಾಜ್ಯದಲ್ಲಿ 35 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆಯಿಂದ ಕೋವಿಡ್ ಟೆಸ್ಟ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯದ ಮೆಡಿಕಲ್ ಕಾಲೇಜು ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಕೋವಿಡ್ ಟೆಸ್ಟ್ ಲ್ಯಾಬ್ ಓಪನ್ ಮಾಡಲು ಸಿದ್ಧತೆ ನಡೆಸಲಾಗಿದೆ.