ನವದೆಹಲಿ : ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 518 ರನ್ಗಳಿಸಿ ಡಿಕ್ಲೇರ್ ಘೋಷಿಸಿತ್ತು. ವೆಸ್ಟ್ ಇಂಡೀಸ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ ಕೇವಲ 248 ರನ್ಗಳಿಸಿ ಆಲೌಟ್ ಆಗಿದೆ. ಇತ್ತ 270 ರನ್‌ಗಳ ಮುನ್ನಡೆ ಪಡೆದಿದ್ದ ಟೀಮ್ ಇಂಡಿಯಾ ಇದೀಗ ಫಾಲೋ ಆನ್ ಹೇರುವ ಮೂಲಕ ವೆಸ್ಟ್ ಇಂಡೀಸ್ ತಂಡವನ್ನು ಮತ್ತೆ ಬ್ಯಾಟಿಂಗ್ಗೆ ಆಹ್ವಾನಿಸಿತ್ತು. ಎರಡನೇ ಇನಿಂಗ್ಸ್ ನಲ್ಲಿ ವೆಸ್ಟ್ ಇಂಡೀಸ್ ತಂಡವು 390 ರನ್ ಗಳಿಗೆ ಆಲೌಟ್ ಆಗಿತ್ತು.
ಬಳಿಕ ಭಾರತ ವಿಕೆಟ್ ಕಳೆದುಕೊಂಡು 124 ರನ್ ಗಳಿಸುವ ಮೂಲಕ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಎರಡನೇ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾದ ಕೆ.ಎಲ್. ರಾಹುಲ್ ಆಕರ್ಷಕ ಅರ್ಧ ಶತಕದ (58) ನೆರವಿನಿಂದ ಟೀಂ ಇಂಡಿಯಾ ಗೆಲುವು ಸಾಧಿಸಿದೆ.
ಈ ಗೆಲುವಿನೊಂದಿಗೆ, ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು. ದೆಹಲಿ ಟೆಸ್ಟ್‌ನಲ್ಲಿ, ವೆಸ್ಟ್ ಇಂಡೀಸ್ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 390 ರನ್ ಗಳಿಸಿತು. ಭಾರತ ತನ್ನ ಮೊದಲ ಇನ್ನಿಂಗ್ಸ್ ಅನ್ನು 518/5 ಕ್ಕೆ ಡಿಕ್ಲೇರ್ ಮಾಡಿತ್ತು, ಆದರೆ ವೆಸ್ಟ್ ಇಂಡೀಸ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 248 ರನ್ ಗಳಿಸಿತ್ತು. ಭಾರತ ತನ್ನ ಮೊದಲ ಇನ್ನಿಂಗ್ಸ್‌ನ ಆಧಾರದ ಮೇಲೆ 270 ರನ್‌ಗಳ ಮುನ್ನಡೆ ಸಾಧಿಸಿತು ಮತ್ತು ಫಾಲೋ-ಆನ್ ಅನ್ನು ಜಾರಿಗೊಳಿಸಿತು. ಅಹಮದಾಬಾದ್‌ನಲ್ಲಿ ನಡೆದ ಸರಣಿಯ ಮೊದಲ ಟೆಸ್ಟ್ ಅನ್ನು ಭಾರತ ತಂಡವು ಇನ್ನಿಂಗ್ಸ್ ಮತ್ತು 140 ರನ್‌ಗಳಿಂದ ಗೆದ್ದಿತ್ತು ಎಂಬುದನ್ನು ಗಮನಿಸಬೇಕು.
INDvsWI 2nd Test, Day 5 | India (518/5 d & 120/3) beat West Indies [248 & 390 (f/o)] by 7 wickets to win the series 2-0 and add 12 points to their World Test Championship tally.
(Pic: BCCI) pic.twitter.com/in61oLcj7r
— ANI (@ANI) October 14, 2025