ನವದೆಹಲಿ : 2026ರ ಕೇಂದ್ರ ಸರ್ಕಾರದ ಬಜೆಟ್ ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು. 2026 ಬಜೆಟ್ ಅಭಿವೃದ್ಧಿಗೆ ರಾಜ ಮಾರ್ಗ ಇದ್ದಂತೆ, ದೇಶದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುತ್ತದೆ ಎಂದು ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು.
ಈ ಬಜೆಟ್ ದೇಶದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುತ್ತದೆ, ಈ ಬಜೆಟ್ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ಸಿಗಲಿದೆ. ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಇತಿಹಾಸ ನಿರ್ಮಿಸಿದ್ದಾರೆ ಅವರು ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಇದು ಬಾರಿ ಅಭಿವೃದ್ಧಿ ಹೊಂದುವಂತಹ ಬಜೆಟ್ ಆಗಿದ್ದು ಆದಷ್ಟು ಬೇಗ ಭಾರತ ಮೂರನೇ ಆರ್ಥಿಕತೆ ರಾಷ್ಟ್ರವಾಗಲಿದೆ ಎಂದು ಪ್ರಧಾನ ಮಂತ್ರಿ ಮೋದಿ ತಿಳಿಸಿದರು.
ಲೋಕಲ್ ಟು ಗ್ಲೋಬಲ್ ಗೆ ಬಜೆಟ್ ಸಹಕಾರಿ ಆಗಲಿದೆ. ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಬಜೆಟ್ ಸಹಕಾರಿಯಾಗಲಿದೆ. ಸೆಮಿಕಂಡಕ್ಟರ್, ವೈದ್ಯಕೀಯ ಕ್ಷೇತ್ರದಲ್ಲಿ ಅಭಿವೃದ್ಧಿ ವೈದ್ಯಕೀಯ ಕ್ಷೇತ್ರಕ್ಕೆ ಈ ಬಾರಿ ಬಜೆಟ್ ಸಹಕಾರಿ ಆಗಲಿದೆ ಎಂದು ಪ್ರಧಾನ ಮಂತ್ರಿ ಮೋದಿ ತಿಳಿಸಿದರು.







