ಪಂಜಾಬ್ : ಏಪ್ರಿಲ್ 22ರಂದು ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಭಾರತ ಉಗ್ರರ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳಲು ಹವಣಿಸುತ್ತಿದ್ದು, ಇದೀಗ ಕಾಶ್ಮೀರದ ಕುಪ್ವಾರದಲ್ಲಿ ಉಗ್ರ ಅಡಗುದಾಣವನ್ನು ಭಾರತೀಯ ಸೇನೆ ಪತ್ತೆ ಮಾಡಿದೆ.
ಹೌದು ಕಾಶ್ಮೀರದ ಕುಪ್ವಾರದಲ್ಲಿ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಇದೀಗ ಭಾರತೀಯ ಸೈನಿಕರು ಉಗ್ರರ ಅಡಗುದಾಣವನ್ನು ಪತ್ತೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ತಕ್ಷಣವೇ ಉಗ್ರರ ಅಡಗುದಾಣದ ಮೇಲೆ ಭಾರತೀಯ ಸೈನಿಕರು ದಾಳಿ ಮಾಡುವ ಎಲ್ಲ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ.