ಕಿಶ್ತ್ವಾರ್ : ಭಾರತೀಯ ಸೇನೆಯ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಗುರುವಾರ ಸಿಂಗ್‌ಪೋರಾ ಚತ್ರೂದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಬೆಳಿಗ್ಗೆ ಎನ್‌ಕೌಂಟರ್ ನಡೆಯಿತು.
ಆರಂಭಿಕ ವರದಿಗಳ ಪ್ರಕಾರ, ಮೂರರಿಂದ ನಾಲ್ಕು ಭಯೋತ್ಪಾದಕರ ಗುಂಪನ್ನು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಸಿಕ್ಕಿಹಾಕಿಕೊಂಡಿವೆ ಎಂದು ಹೇಳಲಾಗಿದ್ದು, ಅವರಲ್ಲಿ ಇಬ್ಬರು ಈಗ ಸಾವನ್ನಪ್ಪಿದ್ದಾರೆ.