ನವದೆಹಲಿ: ಉಧಂಪುರ ವಾಯುನೆಲೆಯಲ್ಲಿ ಕಾವಲು ಕಾಯುತ್ತಿದ್ದ ಸೈನಿಕನೊಬ್ಬ ಪಾಕಿಸ್ತಾನದ ಡ್ರೋನ್ ನ ತುಣುಕಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾನೆ. ಈ ಡ್ರೋನ್ ಅನ್ನು ಸೇನಾ ವಾಯು ರಕ್ಷಣಾ ಪಡೆ ಯಶಸ್ವಿಯಾಗಿ ತಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜಸ್ಥಾನ ಮೂಲದ ಸುರೇಂದ್ರ ಸಿಂಗ್ ಮೊಗಾ ಕಳೆದ 14 ವರ್ಷಗಳಿಂದ ಭಾರತೀಯ ವಾಯುಪಡೆಯ ವೈದ್ಯಕೀಯ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಮೇ 7 ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ವೈಮಾನಿಕ ದಾಳಿ ನಡೆಸಿದ ನಂತರ ತೀವ್ರಗೊಂಡ ಯುದ್ಧ ಚಟುವಟಿಕೆಗಳನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮವನ್ನು ಘೋಷಿಸುವ ಮೊದಲು ಅವರು ಕೊಲ್ಲಲ್ಪಟ್ಟರು.