ನವದೆಹಲಿ : 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಎ ಗುಂಪಿನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿನ ಹಣಾಹಣಿ ಇಂದು ದುಬೈನಲ್ಲಿ ನಡೆಯಲ್ಲಿದೆ.ಆದರೆ ಪಂದ್ಯ ಆರಂಭಕ್ಕೂ ಮುನ್ನ ಭಾರತಕ್ಕೆ ಬಿಗ್ ಶಾಕ್ ಎದುರಾಗಿದ್ದು, ರನ್ ಮಷಿನ್ ವಿರಾಟ್ ಕೊಹ್ಲಿ ಕಾಲಿಗೆ ಗಾಯವಾಗಿರುವ ಘಟನೆ ವರದಿಯಾಗಿದೆ.
ಹೌದು ಇಂದು ಇಂಡಿಯಾ ಹಾಗೂ ಬದ್ಧವೈರಿ ಪಾಕಿಸ್ತಾನ ನಡುವೆ ಹೈವೊಲ್ಟೇಜ್ ಪಂದ್ಯ ನಡೆಯಲಿದೆ. ಇದರ ನಡುವೆ ಭಾರತಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು ಪಂದ್ಯಕ್ಕೂ ಮುನ್ನವೇ ವಿರಾಟ್ ಕೊಹ್ಲಿ ಅವರು ಕಾಲಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ವಿರಾಟ್ ಕೊಹ್ಲಿ ಅವರಿಗೆ ಅಭ್ಯಾಸದ ವೇಳೆ ತಮ್ಮ ಕಾಲಿಗೆ ಗಾಯ ಮಾಡಿಕೊಂಡಿದ್ದು, ಗಾಯವಾಗಿರುವ ಕಾಲಿಗೆ ಐಸ್ ಕ್ಯೂಬ್ ಕಟ್ಟಿಕೊಂಡಿರುವ ಫೋಟೋ ಇದೀಗ ವೈರಲ್ ಆಗಿದೆ. ಒಂದು ಕಡೆ ಇದು ಕೊಹ್ಲಿಗೆ ಕೊನೆ ಚಾಂಪಿಯನ್ ಶಿಪ್ ಲೀಗ್ ಆಗಲಿದೆ ಎಂದು ಹೇಳುತ್ತಿದ್ದರೆ, ಇನ್ನೊಂದು ಕಡೆ ಕಾಲಿಗೆ ಗಾಯ ಆಗಿರೋದು ಅಭಿಮಾನಿಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಪಂದ್ಯ ಆರಂಭ ಯಾವಾಗ?
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಇಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ. ಹಾಗಾಗಿ ಟಾಸ್ 2 ಗಂಟೆಗೆ ನಡೆಯಲಿದೆ.ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಸ್ಪೋರ್ಟ್ಸ್ 18 ನೆಟ್‌ವರ್ಕ್‌ಗಳ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಪ್ರಸಾರ ಮಾಡಲಾಗುತ್ತದೆ.ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಮೊಬೈಲ್‌ನಲ್ಲಿ ಲಭ್ಯವಿರುತ್ತದೆ.