ನವದೆಹಲಿ : ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜಾಗತಿಕ ಸುಂಕಗಳನ್ನ ರದ್ದುಗೊಳಿಸಿದ ಅಮೆರಿಕದ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪಿನ ಪರಿಣಾಮವನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಟ್ರಂಪ್’ಗೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದ ಈ ತೀರ್ಪು ಅಮೆರಿಕ ಮತ್ತು ಭಾರತದಲ್ಲಿ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದ್ದು, ವ್ಯಾಪಾರ ಮತ್ತು ಅಂತರರಾಷ್ಟ್ರೀಯ ಸಂಬಂಧಗಳ ಮೇಲೆ ಇದರ ಪರಿಣಾಮಗಳ ಬಗ್ಗೆ ರಾಜಕೀಯ ನಾಯಕರು ಚಿಂತಿಸುತ್ತಿದ್ದಾರೆ.
ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಯಾವುದೇ ಔಪಚಾರಿಕ ಪ್ರತಿಕ್ರಿಯೆಯನ್ನು ನೀಡುವ ಮೊದಲು ಭಾರತ ಸರ್ಕಾರವು ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪನ್ನು ಅಧ್ಯಯನ ಮಾಡುತ್ತದೆ ಎಂದು ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, “ಅಮೆರಿಕದ ಉನ್ನತ ನ್ಯಾಯಾಲಯವು ಕೆಲವು ತೀರ್ಪು ನೀಡಿದೆ ಮತ್ತು ಭಾರತ ಸರ್ಕಾರವು ಅದನ್ನು ಅಧ್ಯಯನ ಮಾಡುತ್ತದೆ ಮತ್ತು ಯಾವುದೇ ಪ್ರತಿಕ್ರಿಯೆಯನ್ನು ನೀಡಬೇಕಾದರೆ, ಅದನ್ನು ವಾಣಿಜ್ಯ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯ ನೀಡುತ್ತದೆ, ನನ್ನಿಂದಲ್ಲ ಎಂದು ಮಾಧ್ಯಮಗಳಲ್ಲಿ ಓದಿದ್ದೇನೆ” ಎಂದು ಹೇಳಿದರು.
ಈ ವಿಷಯವು ವಾಣಿಜ್ಯ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ ಮತ್ತು ಯಾವುದೇ ಅಧಿಕೃತ ಪ್ರತಿಕ್ರಿಯೆಯನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ನಂತರ ಈ ಇಲಾಖೆಗಳಿಂದ ಬರುತ್ತದೆ ಎಂದು ಅವರು ಹೇಳಿದರು.
#WATCH | Kalaburagi | On the US Supreme Court's order on the US tariffs, Union Minister Pralhad Joshi says, "I have read in the media that the US top court has given some judgment and the Indian government will study that and whatever the reaction needs to be given, that will be… pic.twitter.com/7KkVqFwHEv
— ANI (@ANI) February 21, 2026
ಭಾರತದ ಶಿಕ್ಷಣ ಕ್ಷೇತ್ರದಲ್ಲಿ AI ಕ್ರಾಂತಿ: 20 ಲಕ್ಷ ಶಿಕ್ಷಕರಿಗೆ ತರಬೇತಿ ನೀಡಲಿದೆ ಮೈಕ್ರೋಸಾಫ್ಟ್!








