ಮುಂಬೈ : ಮಹಿಳಾ ಟಿ20 ಏಷ್ಯಾಕಪ್ 2024ಕ್ಕೆ ಭಾರತ ತಂಡವನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಪ್ರಕಟಿಸಿದೆ. ಮುಂಬೈ ಇಂಡಿಯನ್ಸ್ ಸ್ಪಿನ್ನರ್ ಸೈಕಾ ಇಶಾಕ್ ಜುಲೈ 19 ರಿಂದ ಶ್ರೀಲಂಕಾದಲ್ಲಿ ಪ್ರಾರಂಭವಾಗುವ ಮೆಗಾ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.
ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ನಿರತವಾಗಿದೆ, ಆದರೆ ನಿಖರವಾಗಿ 13 ದಿನಗಳ ನಂತರ ಟೀಮ್ ಇಂಡಿಯಾ ಪಾಕಿಸ್ತಾನವನ್ನು ಎದುರಿಸಲಿದೆ. ಏಷ್ಯಾಕಪ್ ಟಿ20 ಟೂರ್ನಮೆಂಟ್’ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಇದಕ್ಕಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಇದರಲ್ಲಿ 15 ಆಟಗಾರರು ಸ್ಥಾನ ಪಡೆದಿದ್ದಾರೆ.
ಮಹಿಳಾ ಏಷ್ಯಾ ಕಪ್ 2024 ಭಾರತ ತಂಡ ಇಂತಿದೆ.!
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಂಕಾ ಪಾಟೀಲ್, ಸಜನಾ ಸಜೀವನ್.
ಮೀಸಲು ಆಟಗಾರರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್.
BREAKING : ಚೀನಾದ ಶಾಂಡೊಂಗ್’ನಲ್ಲಿ ಭಾರೀ ಬಿರುಗಾಳಿಗೆ 5 ಮಂದಿ ಬಲಿ, 83 ಜನರಿಗೆ ಗಾಯ
BREAKING : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಎನ್ಕೌಂಟರ್ : ನಾಲ್ವರು ಉಗ್ರರ ಹತ್ಯೆ
IND vs ZIM : ‘ಟಿ20 ವಿಶ್ವಕಪ್ ಚಾಂಪಿಯನ್’ಗೆ ಬಿಗ್ ಶಾಕ್ : ಜಿಂಬಾಬ್ವೆ ವಿರುದ್ಧ ಸೋತು ಸುಣ್ಣವಾದ ಟೀಂ ಇಂಡಿಯಾ