ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದರು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಮತ್ತೊಂದು ಬಾರಿ ಅನಾಹುತ ಒಂದು ತಪ್ಪಿದೆ. ಇಂಧನ ಖಾಲಿಯಾದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೌದು ಇಂಧನ ಖಾಲಿಯಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶವಾಗಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಜೂನ್ 19ರಂದು ನಡೆದ ಘಟನೆ ತಡವಾಗಿ ಬಳಕೆಗೆ ಬಂದಿದೆ. ಇಂಧನ ಖಾಲಿಯಾಗಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಅದೃಷ್ಟವಶಾತ್ ಭಾರಿ ಅನಾಹುತ ಒಂದು ತಪ್ಪಿದೆ.
ಗುವಾಹಟಿಯಿಂದ ಇಂಡಿಗೋ ವಿಮಾನ ಚೈನ್ನೈ ಗೆ ತೆರಳುತ್ತಿತ್ತು. 180 ಪ್ರಯಾಣಿಕರನ್ನು ಹೊತ್ತು ಇಂಡಿಗೋ ವಿಮಾನ ಚೈನ್ನೈಗೆ ತೆರಳುತ್ತಿತ್ತು. ಇಂಧನ ಖಾಲಿಯಾಗಿದ್ದನ್ನು ತಿಳಿದು MAYDAYಎಂದು ಕೂಗಿ ಪೈಲಟ್ ತುರ್ತು ಭೂಸ್ಪರ್ಶ ಮಾಡಿದ್ದಾರೆ. ನಂತರ ಇಂಧನ ತುಂಬಿಸಿಕೊಂಡು ವಿಮಾನ ಚೈನ್ನೈಗೆ ತೆರಳಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಭಾರಿ ಅನಾಹುತ ಒಂದು ತಪ್ಪಿದೆ.