ನವದೆಹಲಿ : ಇಂಡಿಗೋ ವಿಮಾನದಲ್ಲಿ ಗಗನಸಖಿಗೆ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ದೆಹಲಿ ಮತ್ತು ಶಿರಡಿ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ವಿಮಾನ ಲ್ಯಾಂಡ್ ಆದ ತಕ್ಷಣ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು ಇಂಡಿಗೋ ವಿಮಾನದಲ್ಲಿ ಗಗನಸಖಿಗೆ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಅನುಚಿತವಾಗಿ ವರ್ತಿಸಿದ್ದು ಅಲ್ಲದೇ ಅಸಭ್ಯವಾಗಿ ಗಗನಸಖಿಯನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಫ್ಲೈಟ್ ಲ್ಯಾಂಡ್ ಆಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.