ಬೆಂಗಳೂರು : ರಾಜ್ಯದಲ್ಲಿ ಅಮಾನವೀಯ ಘಟನೆ ನಡೆದಿದ್ದು ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದೆ.
ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ ಎಂದು ಪೋಷಕರು ಮುಖ್ಯ ಶಿಕ್ಷಕ ಅಭಿವ್ರಿದ್ದ ಆಕ್ರೋಶ ಹೊರಹಾಕಿದ್ದು, ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.