ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆಯೊಂದು ನಡೆದಿದ್ದು, ಸಾಮಾಜಿಕ ಬಹಿಷ್ಕಾರಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಗ್ರಾಮದ ನಿವಾಸಿ ರಂಗಸ್ವಾಮಿ ಎಂಬುವರು ಸಾಮಾಜಿಕ ಬಹಿಷ್ಕಾರಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.