ಬೆಂಗಳೂರು : ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಅವಹೇಳನ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಇಂದು ನಡೆಯಿತು. ಬಳಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು ತುರ್ತು ಪರಿಸ್ಥಿತಿಯ ಹೆಸರಿನಲ್ಲಿ ಇಂದಿರಾ ಗಾಂಧಿ ಅವರಿಗೆ ಬಿಜೆಪಿ ಅವಹೇಳನ ಮಾಡಿದೆ ಎಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ. ಬಿಜೆಪಿ ವಿರುದ್ಧ ಸಿಡಿದೆದ್ದು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.ಬಿಜೆಪಿ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹಾಕಿದ್ದಾರೆ. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.